ಹಾಸನ ಜಿಲ್ಲೆಯಲ್ಲಿ ಇಂದು ಹೊಸದಾಗಿ 165 ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಜೊತೆಗೆ ಇಂದು 3 ಸಾವು ಸಂಭವಿಸಿದೆ ಅದರೊಂದಿಗೆ ಸೋಂಕಿತರ ಸಂಖ್ಯೆ 1673ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಸತೀಶ್ ತಿಳಿಸಿದ್ದಾರೆ.
ಇದುವರೆಗೆ 778 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 851 ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ 44 ಮಂದಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದರು. ಕೋವಿಡ್-19 ಉಲ್ಬಣವಾಗುತ್ತಿರುವ ಹನ್ನಲೆಯಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕರೋನಾ ಸೋಂಕು ತಡೆಗಟ್ಟುವಲ್ಲಿ ಸಹಕರಿಸಬೇಕು ಎಂದು ಡಾ ಸತೀಶ್ ಹೇಳಿದರು.
0 Comments