14 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿ ಅವರಿಂದ 35 ಲಕ್ಷ ಬೆಲೆಬಾಳುವ ಚಿನ್ನಾಭರಣವನ್ನು ವಶಪಡಿಸಿಕೊಳ್ಳುವಲ್ಲಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ

ಹಾಸನ:-14 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತರ್ ಜಿಲ್ಲಾ  ಕಳ್ಳರನ್ನು ಬಂಧಿಸಿ ಅವರಿಂದ 35 ಲಕ್ಷ ಬೆಲೆಬಾಳುವ ಚಿನ್ನಾಭರಣವನ್ನು ವಶಪಡಿಸಿಕೊಳ್ಳುವಲ್ಲಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಹೇಳಿದ್ದಾರೆ .
ನಗರದ ತಮ್ಮ ಕಚೇರಿಯಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು ಜಿಲ್ಲೆಯ ವಿವಿಧೆಡೆ ಹಾಗೂ ಬೆಂಗಳೂರಿನ ಕಳ್ಳತನ  ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗಿರೀಶ್ ಮತ್ತು ರಾಜೇಶ್ ಎಂಬ ಆರೋಪಿಯನ್ನು ಬಂಧಿಸಲಾಗಿದೆ ಎಂದರು

Post a Comment

0 Comments