ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರ 30ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ತಾಲೂಕಿನ ದೊಡ್ಡಪುರ ಗ್ರಾಮದಲ್ಲಿರುವ ಶ್ರೀ ಉದ್ಭವ ರಾಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸ್ಥಳೀಯರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಲಾಯಿತು.
ಕೊರೊನಾ ಹಿನ್ನೆಲೆ ಈ ಬಾರಿ ಹುಟ್ಟುಹಬ್ಬವನ್ನು ಸರಳವಾಗಿ ಹಾಗೂ ಸಾರ್ವಜನಿಕರಿಗೆ ಉಚಿತವಾಗಿ ಮಾಸ್ಕ್, ಸ್ಯಾನಿಟೈಸರ್ ಹಾಗೂ ರೋಗನಿರೋಧಕ ಶಕ್ತಿ ಹೆಚ್ಚಿಸುವ ಮಾರೆಗಳನ್ನು ನೀಡುವಂತೆ ಸಂಸದ ಪ್ರಜ್ವಲ್ ರೇವಣ್ಣ ಅವರು ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಮನವಿ ಮಾಡಿದ್ದರಿಂದ ಶ್ರೀ ಉದ್ಭವ ರಾಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಗ್ರಾಮಸ್ಥರಿಗೆ ಮಾಸ್ಕ್, ಸ್ಯಾನಿಟೈಸ್ ವಿತರಿಸಿದರು. ಇದೇ ವೇಳೆ ಪ್ರಜ್ವಲ್ ಅಭಿಮಾನಿ ಯುವ ಬಳಗದಿಂದ ರಕ್ತದಾನ ಮಾಡಲಾಯಿತು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಹೆಚ್.ಪಿ. ಸ್ವರೂಪ್ ಮಾತನಾಡಿ, ಸಂಸದ ಪ್ರಜ್ವಲ್ ರೇವಣ್ಣನವರ 30ನೇ ವರ್ಷದ ಹುಟ್ಟು ಹಬ್ಬವನ್ನು ಜೆಡಿಎಸ್ ವತಿಯಿಂದ ಸರಳವಾಗಿ ಆಚರಿಸಲಾಗುತ್ತಿದೆ. ಅವರಿಗೆ ಭಗವಂತನು ಒಳ್ಳೆಯದನ್ನು ಮಾಡಿ, ಆರೋಗ್ಯ, ದೀರ್ಘ ಆಯಾಸ್ಸು, ಅಧಿಕಾರಿ ನೀಡಿ ಹೆಚ್ಚಿನ ಸೇವೆ ಮಾಡುವ ಶಕ್ತಿ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸಿರುವುದಾಗಿ ಹೇಳಿದರು.
ಇಂದು ರಕ್ತದ ಕೊರತೆ ಹೆಚ್ಚು ಇರುವುದರಿಂದ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ. ಕೊರೊನಾ ಸಂದರ್ಭದಲ್ಲಿ ಸಂಸದರು ಜಿಲ್ಲೆಯ ಎಲ್ಲಾ ಭಾಗಗಳಲ್ಲೂ ತಿರುಗಿ ಜನರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ. ಇನ್ನು ಸಮಾಜಸೇವೆ ಮಾಡುವ ಕೆಲಸಕ್ಕೆ ಶಕ್ತಿ ಕೊಡಲಿ ಎಂದರು.
0 Comments