ರಾಜ್ಯದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಸೆ.1 ರಿಂದಲೇ ಸೇವೆಗಳನ್ನು ಪುನರ್ ಆರಂಭಿಸುವಂತೆ ರಾಜ್ಯ ಸರ್ಕಾರ ಆದೇಶ

ರಾಜ್ಯದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಸೆ.1 ರಿಂದಲೇ ಸೇವೆಗಳನ್ನು ಪುನರ್ ಆರಂಭಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೌದು, ರಾಜ್ಯದಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಧಾರ್ಮಿಕ'' ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಪೂಜಾ ವಿಧಿ ವಿಧಾನಗಳು/ಪೂಜಾ ಕೈಂಕರ್ಯಗಳು. ತೀರ್ಥ ವಿತರಣೆ ಹಾಗೂ ಜನಸಂದಣಿ ಸೇರುವ ಕಾರ್ಯಕ್ರಮ ರದ್ದು ಮಾಡಲಾಗಿತ್ತು. ಇದೀಗ ದೇವಾಲಯಗಳಲ್ಲಿ ಸೇವೆಗಳನ್ನು ಪುನರ್ ಆರಂಭಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. )£¢€¥¥

ಕೆಲ ಇದೇ ವೇಳೆ ಕೆಲ ಷರತ್ತುಗಳೊಂದಿಗೆ ಸೆ.1ರಿಂದಲೇ ಜಾರಿಗೆ ಬರುವಂತೆ ದೇವಸ್ಥಾನದಲ್ಲಿ ಎಲ್ಲ ರೀತಿಯ ಸೇವೆಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡುವ ಬಗ್ಗೆ ಸುತ್ತೋಲೆ ಹೊರಡಿಸಿದ್ದು, ಸುತ್ತೋಲೆಯಲ್ಲಿ ದೇವಾಲಯಗಳಲ್ಲಿ ಜಾತ್ರಾ ಉತ್ಸವಗಳು, ಬ್ರಹ್ಮ ರಥೋತ್ಸವ, ಪವಿತ್ರೋತ್ಸವ ಮುಂತಾದ ವಿಶೇಷ ಉತ್ಸವಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಆದರೆ ಅವಶ್ಯಕ ಸಮಯದಲ್ಲಿ ಈ ಉತ್ಸವಗಳನ್ನು ಕೇವಲ ದೇವಾಲಯದ ಆಗಮಿಕರು, ತಂತ್ರಿಗಳು, ಅರ್ಚಕರು, ಸಿಬ್ಬಂದಿ ಸಮ್ಮುಖದಲ್ಲಿ ದೇವಾಲಯದ ಒಳಾಂಗಣದಲ್ಲಿ ಸಾರ್ವಜನಿಕ ಜನಸಂದಣಿ ಇಲ್ಲದಂತೆ ನಡೆಸಲು ಸೂಚಿಸಲಾಗಿದೆ.
@hassan info 
Fb insta YouTube

Post a Comment

0 Comments