5 ಕೆಜಿ ಗಾಂಜಾ ಹಾಗೂ ವ್ಯಕ್ತಿ ಬಂಧನ




ಆಲೂರು : ತಹಶೀಲ್ದಾರ್ ಶಿರೀನ್ ತಾಜ್ ಹಾಗೂ ಆಲೂರು ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ರೇವಣ್ಣನವರ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಮನೆಯ ಹಿತ್ತಲಿನಲ್ಲಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಬಂಧಿಸಿ ೫ ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ತಾಲೂಕಿನ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ವಿದ್ಯಾನಗರ ಗ್ರಾಮದಲ್ಲಿ ನಿವಾಸಿ ಮಂಜು ಎಂಬಾತ ತನ್ನ ಮನೆಯ ಹಿತ್ತಲಿನಲ್ಲಿ ಕರೆದಿದ್ದಾನೆ ಎಂಬ ಖಚಿತ ಮಾಹಿತಿ ಆಧಾರದ ಮೇರೆಗೆ ಶುಕ್ರವಾರ ದಾಳಿ ನಡೆಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ವೇಳೆ ಮಾತನಾಡಿದ ತಹಶೀಲ್ದಾರ್ ಶಿರೀನ್ ತಾಜ್ ರಾಜ್ಯದಲ್ಲಿ ಗಾಂಜಾ ಪ್ರಕರಣ ತೀವ್ರತೆಯಿಂದ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಕಳೆದವಾರ ತಾಲೂಕಿನ ಹಂಪನಕುಪ್ಪೆ ಗ್ರಾಮದಲ್ಲಿ ವ್ಯಕ್ತಿಯೋರ್ವ ತನ್ನ ತೋಟದ ಬೆಳೆಗಳ ನಡುವೆ ಅಕ್ರಮವಾಗಿ ಬೆಳೆದಿದ್ದ ಗಾಂಜಾವನ್ನು ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡಿದ್ದರು ಅದು ಮಾಸುವ ಮುನ್ನವೇ ಪಾಳ್ಯ ಗ್ರಾಮದಲ್ಲಿ ವ್ಯಕ್ತಿಯೋರ್ವ ತನ್ನ ಮನೆಯ ಹಿತ್ತಲಿನಲ್ಲಿ ಗಾಂಜಾ ಬೆಳೆದಿರುವ ಪತ್ತೆಯಾಗಿದೆ ಇಂತಹ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರಿಗೆ ತಿಳಿದಿದ್ದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ.

Post a Comment

0 Comments