ಬಸ್ ಪಾಸ್ ದರ ಏರಿಕೆ ಇಲ್ಲ

ಬಸ್ ಪಾಸ್ ದರ ಏರಿಕೆ ಇಲ್ಲ: 

ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ನೀಡಲಾಗುತ್ತಿರುವ ಬಸ್ ಪಾಸ್‍ಗಳ ದರವನ್ನು ಹೆಚ್ಚಿಸುವುದಿಲ್ಲ ಮತ್ತು ಈ ಹಿಂದೆ ಇದ್ದ ಮಾನದಂಡಗಳನ್ನು ಬದಲಿಸುವ ಯಾವುದೇ ಉದ್ದೇಶವಿಲ್ಲ, ಆದ್ದರಿಂದ ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಅನಗತ್ಯ ಆತಂಕಕ್ಕೆ ಒಳಗಾಗಬಾರದು ಎಂದು ನಾನು ಮನವಿ ಮಾಡಿಕೊಳ್ಳುತ್ತಿದ್ದೇನೆ. 

ವಿದ್ಯಾರ್ಥಿಗಳ ಬಸ್ ಪಾಸ್‍ಗಳ ದರ ಹೆಚ್ಚಿಸಲಾಗುತ್ತದೆ ಎಂಬುದು ಕೇವಲ ವದಂತಿಯಷ್ಟೇ. ಆ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ.  ಕಳೆದ ಶೈಕ್ಷಣಿಕ ವರ್ಷದಲ್ಲಿ ಬಸ್ ಪಾಸ್‍ಗಳನ್ನು ಯಾವ ಪ್ರಮಾಣದ ದರದಲ್ಲಿ ವಿತರಿಸಲಾಗಿತ್ತೋ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿಯೂ ಸಹ ಅದೇ ರೀತಿಯಲ್ಲಿ ಅಳವಡಿಸಿಕೊಳ್ಳಲಾಗುವುದು, ಅಷ್ಟೇ ಅಲ್ಲ ಹಿಂದಿನ ಮಾನದಂಡಗಳನ್ನೇ ಮುಂದುವರೆಸಲಾಗುವುದು ಎಂದು ನಾನು ಈ ಮೂಲಕ ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ.

Post a Comment

0 Comments