ಹಾಸನದ ಯುವಕ ಕೊಡಚಾದ್ರಿ ಬೆಟ್ಟದ ಜಲಪಾತದಲ್ಲಿ ಅಪಾಯಕ್ಕೆ ಸಿಲುಕಿ ಪಾರದ


ಶಿವಮೊಗ್ಗ: ಕೊಡಚಾದ್ರಿ ಬೆಟ್ಟದ ಸಮೀಪದ ಹಿಡ್ಲುಮನೆ ಜಲಪಾತ ನೋಡಲು ಹೋಗಿದ್ದ 29 ವರ್ಷದ ಮೆಡಿಕಲ್ ವಿದ್ಯಾರ್ಥಿಯೊಬ್ಬ ಬಂಡೆಯಲ್ಲಿ ಸಿಲುಕಿ ಅಪಾಯಕ್ಕೆ ತುತ್ತಾಗಿದ್ದ ಘಟನೆ ಭಾನುವಾರ ಸಂಭವಿಸಿದೆ.

ಬೆಂಗಳೂರಿನಲ್ಲಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ, ಹಾಸನ ಮೂಲದ ಯುವಕ ಅಮೋಘ ತನ್ನ ಸ್ನೇಹಿತರಾದ ತಮಿಳುನಾಡು ಮೂಲದ ಸಂಜೀವ್, ಜೈಪುರ ಮೂಲ ಮಧು ಎಂಬುವರೊಂದಿಗೆ ಕೊಡಚಾದ್ರಿ ಪ್ರವಾಸಕ್ಕೆ ಶನಿವಾರ ರಾತ್ರಿ ಬಂದಿದ್ದು, ಇಲ್ಲಿನ ಹೋಂ ಸ್ಟೇ ನಲ್ಲಿ ತಂಗಿದ್ದರು. ಭಾನುವಾರ ಮುಂಜಾನೆ ಜೀಪ್‌ನಲ್ಲಿ ಕೊಡಚಾದ್ರಿ ಗಿರಿ ಹತ್ತಿದ ಮೂವರೂ ನಂತರ ನೇರವಾಗಿ ಹಿಡ್ಡಮನೆ. ಜಲಪಾತಕ್ಕೆ ತೆರಳಿದ್ದರು. ಮೂವರು ಫಾಲ್ಸ್ ಕೆಳಗಿನಿಂದ ಮೇಲ್ಬಾಗಕ್ಕೆ ತೆರಳಿದ್ದರು. ಆದರೆ ಫಾಲ್ಸ್ನ ಪಕ್ಕದಲ್ಲಿ ಕೆಳಗಿಳಿಯಲು ಹೋದ ಅಮೋಘ ಅಲ್ಲಿಯೇ ಸಿಲುಕಿಕೊಂಡಿದ್ದಾನೆ. ಇನ್ನಿಬ್ಬರು ಬೇರೆ ಮಾರ್ಗದಿಂದ ಕೆಳಗೆ ಇಳಿದಿದ್ದಾರೆ.
ಮೇಲೆ ಹತ್ತಲು ಆಗದೆ, ಕೆಳಗೆ ಇಳಿಯಲು ಆಗದೆ ಮಧ್ಯದಲ್ಲಿ ಸಿಕ್ಕಿಬಿದ್ದ ಅಮೋಘ ಅಪಾಯಕ್ಕೆ ತುತ್ತಾಗಿದ್ದ. ಜಲಪಾತ ಮಧ್ಯಭಾಗದ ಕಲ್ಲಿನ ಮೇಲೆ ಒಂದೇ ಕಾಲಿನಲ್ಲಿ ಎರಡು ಗಂಟೆ ಕಾಲ ನಿಂತಿದ್ದ ಅಮೋಘ, ಸಹಾಯಕ್ಕಾಗಿ ಗೋಗರೆಯುತ್ತಿದ್ದರು. ಸ್ವಲ್ಪ ಅಲುಗಾಡಿದರೆ 80 ಅಡಿ ಪ್ರಪಾತಕ್ಕೆ ಬೀಳುವ ಸಾಧ್ಯತೆ ಇದೆ. ಅಮೋಘ ಅಪಾಯದಲ್ಲಿ ಸಿಲುಕಿದ್ದ ನ್ನು ನೋಡಿದ ಸ್ನೇಹಿತರಿಬ್ಬರು ಆತನ ರಕ್ಷಣೆಗಾಗಿ ಕೂಗಿ ಕೊಂಡಿದ್ದಾರೆ. ಆಗ ಕೆಳಗಿದ್ದ ಕೆಲ ಪ್ರವಾಸಿಗರು, ಸ್ಥಳೀಯರು ಸ್ಥಳಕ್ಕೆ ಧಾವಿಸಿದ್ದಾರೆ. ಆದರೆ ಅಪಾಯದಿಂದ ಅಮೋಘವನ್ನು ಹೊರ ತರಲು ಆಗಲಿಲ್ಲ.

ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರು ಸೇರಿದಂತೆ 50 ಜನರ ತಂಡ ಸತತ ಐದು ಗಂಟೆ ಕಾರ್ಯಾಚರಣೆ ನಡೆಸಿ ಅಮೋಘವನ್ನು ಸುರಕ್ಷಿತವಾಗಿ ಕೆಳಗಿಳಿಸುವಲ್ಲಿ ಯಶಸ್ವಿಯಾದರು.

Post a Comment

0 Comments