ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ



*ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ಅಗತ್ಯ ಪೂರ್ವಸಿದ್ಧತೆಗಳನ್ನು ಸಂಬಂಧಪಟ್ಟ ಇಲಾಖೆಗಳು ಶೀಘ್ರವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಯವರ ಕಚೇರಿಯಲ್ಲಿಂದು ಹಾಸನಾಂಬ ದರ್ಶನೋತ್ಸವ ಮಹೋತ್ಸವ ಪೂರ್ವಸಿದ್ಧತೆ ಸಭೆ ನಡೆಸಿದ ಅವರು ದೀಪಾಲಂಕಾರ, ಸಿಸಿ ಟಿವಿ ಅಳವಡಿಕೆ, ಎಲ್.ಇ.ಡಿ, ಅಳವಡಿಕೆ, ಪುಷ್ಪಾಲಂಕಾರ ಹಾಗೂ ಬ್ಯಾರಿಕೇಡ್ ನಿರ್ಮಿಸಲು ಟೆಂಡರ್ ಪ್ರಕ್ರಿಯೆ ಶೀಘ್ರಮುಗಿಸಿ ಕಾರ್ಯ ಆರಂಭಿಸುವಂತೆ ತಿಳಿಸಿದರು. ದೇವಸ್ಥಾನದ ಆಸುಪಾಸುಗಳಲ್ಲಿ ನಾಲ್ಕು ಸ್ಥಳಗಳಲ್ಲಿ ಎಲ್.ಇ.ಡಿ ಅಳವಡಿಸಲು ಹಾಗೂ ನಗರದ ವಿವಿಧ ಮುಖ್ಯ ಪ್ರದೇಶಗಳ ಪರಿಶೀಲನೆ ನಡೆಸಿ ಎಲ್.ಇ.ಡಿ. ಅಳವಡಿಕೆಗೆ ಸೂಕ್ತ ಜಾಗಗಳ ಬಗ್ಗೆ ತೀರ್ಮಾನಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ದೇವಸ್ಥಾನದ ಆಡಳಿತಾಧಿಕಾರಿಯಾಗಿರುವ ಉಪ ವಿಭಾಗಾಧಿಕಾರಿ ಯವರಿಗೆ ಜಿಲ್ಲಾಧಿಕಾರಿಯವರು ತಿಳಿಸಿದರು.

*ನಗರದ ಎಲ್ಲಾ ರಸ್ತೆಗಳ ಗುಂಡಿಗಳನ್ನು ಮಳೆ ನಿಂತ ತಕ್ಷಣ ಶೀಘ್ರವಾಗಿ ಮುಚ್ಚುವಂತೆ ನಗರಸಭೆ ಹಾಗೂ ಪಿ.ಡಬ್ಲೂ.ಡಿ. ಅಧಿಕಾರಿಗಳಿಗೆ ಆರ್. ಗಿರೀಶ್ ಅವರು ಸೂಚಿಸಿದರು.

*ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ಅವರು ಮಾತನಾಡಿ ನಗರದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್-19 ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳು ಶ್ರಮಿಸುವಂತೆ ಹಾಗೂ ಹಾಸನಂಬ ಜಾತ್ರಾ ಮಹೋತ್ಸವಕ್ಕೆ ಯಾವುದೇ ಅಡೆತಡೆಗಳು ಆಗದಂತೆ ಮುನ್ನೆಚ್ಚರಿಕಾ ಕ್ರಮವಹಿಸಲು ಅವರು ತಿಳಿಸಿದರು.

*ಉಪ ವಿಭಾಗಾಧಿಕಾರಿ ಬಿ.ಎ. ಜಗದೀಶ್ ಅವರು ಈವರೆಗಿನ ಸಿದ್ಧತೆಗಳ ಬಗ್ಗೆ ಸಭೆಯ ಗಮನಕ್ಕೆ ತಂದರು.

*ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮಂಜುನಾಥ್, ಪಿ.ಡಬ್ಲ್ಯೂಡಿ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಸುರೇಶ್ ಎನ್.ಟಿ. ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ಸಂಜಯ್, ಧಾರ್ಮಿಕ ದತ್ತಿ ತಹಸೀಲ್ದಾರ್ ಡಿ.ಕೆ. ದಿನೇಶ್, ಶಿರಸ್ತೇದಾರರ ತಿಮ್ಮಯ್ಯ ಹಾಗೂ ದೇವಾಲಯದ ಅರ್ಚಕರು ಸಭೆಯಲ್ಲಿ ಹಾಜರಿದ್ದರು.

Post a Comment

0 Comments