1200 ಕೋಟಿ ರೂ.ಗಳ ಅನುದಾನದಲ್ಲಿ ಶಿರಾಡಿ ಘಾಟ್ ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿರುವುದು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಲಿದೆ.

ಹಾಸನ
1200 ಕೋಟಿ ರೂ.ಗಳ ಅನುದಾನದಲ್ಲಿ ಶಿರಾಡಿ ಘಾಟ್  ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿರುವುದು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಲಿದೆ.

ಹಾಲಿ ದ್ವಿಪಥವಿರುವ ಶಿರಾಡಿ ಘಾಟ್  ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ 1200 ಕೋಟಿ ರೂ.ಗಳ ವೆಚ್ಚದಲ್ಲಿ  ಮೇಲ್ದರ್ಜೆಗೇರಿಸಲು  ಕೇಂದ್ರ ರಾಷ್ಟ್ರೀಯ  ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅನುಮೋದನೆ ನೀಡಿದ್ದಾರೆ. 

 ಕಾಮಗಾರಿ ಕೈಗೆತ್ತಿಕೊಂಡು 2 ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸುವುದಾಗಿ ರಾಷ್ಟ್ರೀಯ ರಸ್ತೆ ಅಭಿವೃದ್ಧಿ ಪ್ರಾಧಿಕಾರ ಹೇಳಿದೆ.

ರಾಜ್ಯ ಸರ್ಕಾರವು ಅಗತ್ಯವಿರುವ ಎಲ್ಲಾ ಸಹಕಾರ ಹಾಗೂ ಅನುಮೋದನೆಗಳನ್ನು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ  ಭರವಸೆ ನೀಡಿದ್ದಾರೆ. 

ಶಿರಾಡಿ ಘಾಟ್ ಹೆದ್ದಾರಿಯನ್ನು ತಕ್ಷಣ ಮೇಲ್ದರ್ಜೆಗೇರಿಸಬೇಕಾಗಿದೆಮಳೆಗಾಲದ ಸಮಯದಲ್ಲಿ ಈ ರಸ್ತೆ ಬಳಕೆ ಅಸಾಧ್ಯ ಎಂಬ ಸ್ಥಿತಿ ನಿರ್ಮಾಣವಾಗಿದೆ .ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. 

ಬೆಂಗಳೂರು ಮತ್ತು ಮಂಗಳೂರಿನ ಸಂಪೂರ್ಣ ಮಾರ್ಗ ಏಕರೀತಿಯ ಚತುಷ್ಪಥ ರಸ್ತೆಯಾಗಲಿದೆ. ಪರಿಸರ ಹಾಗೂ ಆರ್ಥಿಕ ದೃಷ್ಟಿಯಿಂದ ಸುಸ್ಥಿರ ರೀತಿಯಲ್ಲಿ   ರಾಷ್ಟ್ರೀಯ ಹೆದ್ದಾರಿ 75  ಚತುಷ್ಪಥವಾಗಿಸುವ ಮೂಲಕ   ಅತ್ಯಂತ ವೇಗವಾಗಿ ಅಭಿವೃದ್ಧಿ ಗೊಳಿಸಬಹುದಾಗಿದೆ 

ಶಿರಾಡಿ ಘಾಟ್ ಮೂಲಕ ಷಟ್ಪಥ ಸುರಂಗ ಮಾರ್ಗ ನಿರ್ಮಿಸುವ ಬಗ್ಗೆ ಅಧ್ಯಯನ ಕೈಗೊಳ್ಳಲು  ಎನ್.ಹೆಚ್. ಎ. ಐ. ಗೆ ಕೇಂದ್ರ  ಸಚಿವರು ಸೂಚಿದ್ದಾರೆ ಎನ್ನಲಾಗಿದೆ.

ಶಿರಾಡಿ ಘಾಟ್ ರಸ್ತೆ ರಾಜ್ಯದ ಜೀವನಾಡಿ ಇದ್ದಂತೆ. ಈಗಿರುವ ರಸ್ತೆ ಕಿರಿದಾಗಿದೆ. ಇದನ್ನು ನಾಲ್ಕು ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಒಪ್ಪಿಗೆ ನೀಡಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ
ಬಸವರಾಜ ಬೊಮ್ಮಾಯಿ ಸ್ವಾಗತಿಸಿದ್ದಾರೆ.

ಮಂಗಳೂರು ಮತ್ತು ಚೆನ್ನೈ ಬಂದರುಗಳ ನಡುವೆ ನೇರವಾದ ಸಂಪರ್ಕ ಹೊಂದುವ ಈ ರಸ್ತೆಯಿಂದ ವ್ಯಾಪಾರ ವಹಿವಾಟು ಹೆಚ್ಚಾಗುತ್ತದೆ.

ದಕ್ಷಿಣ ಕನ್ನಡದಲ್ಲಿರುವ ಪ್ರವಾಸಿ ತಾಣಗಳಿಗೆ ರಾಜ್ಯ ಮತ್ತು ಅಂತರಾಜ್ಯ ಪ್ರವಾಸಿಗರಿಗೆ ರಸ್ಯೆ ಅಭಿವೃದ್ಧಿ ಯಿಂದ ಸುಖಕರ ಪ್ರಯಾಣಕ್ಕೆ ಅನುಕೂಲವಾಗುತ್ತದೆ.

ಈ ಬೃಹತ್ ಯೋಜನೆ ಜಾರಿ ಮಾಡುವಾಗ ಜೀವ ವೈವಿಧ್ಯತೆ ಯಲ್ಲಿ ಅತ್ಯಂತ ಸೂಕ್ಷ್ಮ ವಲಯವಾದ ಪಶ್ಚಿಮ ಘಟ್ಟ ಪ್ರದೇಶದ ಕಾಡುಗಳಿಗೆ ಯಾವ ರೀತಿಯಲ್ಲಿ ಹಾನಿಯಾಗುತ್ತೆ ಎಂಬುದನ್ನು ಕಾದು ನೋಡಬೇಕು.

Post a Comment

0 Comments