ವೈದ್ಯ ವಿದ್ಯಾರ್ಥಿನಿ ಹಣೆ, ಕುತ್ತಿಗೆಗೆ ಮುತ್ತಿಟ್ಟು ಲೈಂಗಿಕ ದೌರ್ಜನ್ಯ ಎಸಗಿದ ಅಸೋಸಿಯೇಟ್ ಪ್ರೊಫೆಸರ್ ಸಸ್ಪೆಂಡ್

ವೈದ್ಯ ವಿದ್ಯಾರ್ಥಿನಿ ಹಣೆ, ಕುತ್ತಿಗೆಗೆ ಮುತ್ತಿಟ್ಟು ಲೈಂಗಿಕ ದೌರ್ಜನ್ಯ ಎಸಗಿದ ಅಸೋಸಿಯೇಟ್ ಪ್ರೊಫೆಸರ್ ಸಸ್ಪೆಂಡ್ 

ಹಾಸನ: ಹಾಸನ ಹಿಮ್ಸ್ ಆಸ್ಪತ್ರೆಯ ವೈದ್ಯಶಾಸ್ತç ವಿಭಾಗದ ಸಹ ಪ್ರಾಧ್ಯಾಪಕ ಡಾ.ಲೋಕೇಶ್ ಹೆಚ್.ಸಿ. ಅವರು ಕರ್ತವ್ಯದ ವೇಳೆ ಮಹಿಳಾ ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಡಿ ಸೇವೆಯಿಂದ ಅಮಾನತುಗೊಂಡಿದ್ದಾರೆ.
ಕಳೆದ ಜ.12 ರಂದು ವೈದ್ಯ ವಿದ್ಯಾರ್ಥಿಗಳ ಎದುರೇ ಮಹಿಳಾ ಗೃಹ ವೈದ್ಯೆಯ ದೇಹ ಸ್ಪರ್ಶಿಸಿದ್ದಲ್ಲದೆ, ಲಿಫ್ಟ್ನಲ್ಲಿ ಇಳಿಯುವಾಗ ಬಲವಂತವಾಗಿ ಮುತ್ತು ನೀಡಿದ್ದರು ಎನ್ನಲಾಗಿದೆ. ಇದಾದ ಬಳಿಕ ಮೇಲಧಿಕಾರಿಗಳಿಗೆ ದಊರು ನೀಡಿದಂತೆ ಬೆದರಿಕೆ ಹಾಕಿದ್ದರು. ಸದರಿಯವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕೆಂದು ನೊಂದ ವಿದ್ಯಾರ್ಥಿನಿ ಪ್ರಾಧ್ಯಾಪಕರು ಹಾಗೂ ವಿಭಾಗದ ಮುಖ್ಯಸ್ಥರಿಗೆ ದೂರು ನೀಡಿದ್ದರು. ನಂತರ ಹಿಮ್ಸ್ ವೈದ್ಯಶಾಸ್ತç ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ಸುರೇಶ್ ಆರ್.ಎಂ. ಅವರು ಹಿಮ್ಸ್ ನಿರ್ದೇಶಕರಿಗೆ ದೂರು ನೀಡಿದ್ದರು.
ನಂತರ ವೈದ್ಯಕೀಯ ಶಿಕ್ಷಣ ಇಲಾಖೆಗೂ ದೂರು ಹೋಗಿತ್ತು. ಇದನ್ನು ಆಧರಿಸಿ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ( ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) ಅಧಿನಿಯಮ 2013 ರ ಅನ್ವಯ ಆರೋಪವು ಮೇಲ್ನೋಟಕ್ಕೆ ಸಾಬೀತಾಗಿರುವುದರಿಂದ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957 ರ ನಿಯಮ10(1)ಲ ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಸದರಿಯವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸೇವೆಯಿಂದ ಅಮಾನತತ್ತುಗೊಳಿಸಿ ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಡಳಿತ ಮಂಡಳಿ ಉಪಾಧ್ಯಕ್ಷರು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಆದೇಶಿಸಿದ್ದಾರೆ.
ಸದರಿಯವರು ಅಮಾನತ್ತಿನ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೆ ಕೇಂದ್ರ ಸ್ಥಾನವನ್ನು ಬಿಡತಕ್ಕದ್ದಲ್ಲ ಎಂದು ಷರತ್ತು ವಿಧಿಸಿರುವ ಅವರು, ಅಮಾನತ್ತಿನಲ್ಲಿಡಲಾದ ಅವಧಿಯಲ್ಲಿ ಕೆಸಿಎಸ್‌ಆರ್ ನಿಯಮ 98 ರಂತೆ ಡಾ.ಲೋಕೇಶ್ ಜೀವನಾಂಶ ಭತ್ಯೆಗೆ ಅರ್ಹರಾಗಿರುತ್ತಾರೆ ಎಂದು ತಿಳಿಸಿದ್ದಾರೆ.
ತನಿಖೆಗೆ ಆದೇಶ:
ಈ ಪ್ರಕರಣಕ್ಕೆ ಸಂಬAಧಿಸಿದAತೆ ಇಲಾಖಾ ತನಿಖೆಗೂ ಆದೇಶಿಸಲಾಗಿದ್ದು, ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಮತ್ತು ಹಿಮ್ಸ್ ಆಡಳಿತಾಧಿಕಾರಿ ಗಿರೀಶ್ ನಂದನ್ ಅವರಿಗೆ ತನಿಖೆ ಹೊಣೆ ವಹಿಸಲಾಗಿದೆ. ಮೂರು ವಾರದೊಳಗೆ ತನಿಖೆ ನಡೆಸಿ ವರದಿ ನೀಡಲು ಸಮಿತಿ ರಚನೆ ಮಾಡಲಾಗಿದ್ದು, ಹೆಚ್ಚುವರಿ ಡಿಸಿ ಕವಿತಾ ರಾಜಾರಾಂ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ.
ಏನಿದು ಆರೋಪ:
ವೈದ್ಯ ಪದವಿ ಪೂರೈಸಿ ತರಬೇತಿಯಲ್ಲಿದ್ದ ವೈದ್ಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಡಾ.ಲೋಕೇಶ್ ಮೇಲಿದೆ. ಲಿಫ್ಟ್ನಲ್ಲಿ ತೆರಳೋ ವೇಳೆ ಏಕಾಏಕಿ ಮುತ್ತು ನೀಡಿ ನಂತರ ಇದನ್ನು ಯಾರಿಗೂ ಹೇಳದಂತೆ ಬೆದರಿಕೆ ಸಹ ಹಾಕಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಹಿಮ್ಸ್ ವೈದ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಆರ್ ಎಂ ಸುರೇಶ್ ಪ್ರಕರಣದ ಬಗ್ಗೆ ಕೂಲಂಕುಷ ವಿಚಾರಣೆ ನಡೆಸುತ್ತಿದ್ದಾರೆ. ಜನವರಿ 13ರಂದು ಮಹಿಳಾ ಸಿಬ್ಬಂದಿ ಉಪಸ್ಥಿತಿಯಲ್ಲಿ ಸಂತ್ರಸ್ತೆ ಹೇಳಿಕೆ ಪಡೆದು ವಿಚಾರಣೆ ನಡೆಸಲಾಗಿದೆ. ಜನವರಿ 14ರಂದು ಹಿಮ್ಸ್ ನಿರ್ದೇಶಕರಿಗೆ ಈ ಬಗ್ಗೆ ಮಾಹಿತಿ ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಡಾ.ಆರ್ ಎಮ್ ಸುರೇಶ್ ಕೋರಿದ್ದರು. ಜನವರಿ 19ರಂದು ಆರೋಪಿಯನ್ನು ಅಮಾನತುಗೊಳಿಸಿ, ಇಲಾಖಾ ವಿಚಾರಣೆಗೆ ಆದೇಶಿಸಲಾಗಿದೆ. 
ಇದೀಗ ಡಾ.ಲೋಕೇಶ್ ಇವರ ವಿರುದ್ಧದ ಆರೋಪ ಮೇಲ್ನೋಟಕ್ಕೆ ಸಾಬೀತಾಗಿದೆ. ಸದರಿಯವರು ಕರ್ನಾಟಕ ನಾಗರೀಕ ಸೇವಾ(ನಡತೆ) ನಿಯಮಗಳ 1966 ರ ನಿಯಮ ಉಲ್ಲಂಘಿಸಿ ಕರ್ತವ್ಯ ಲೋಪ ಹಾಗೂ ದುರ್ನಡತೆ ಎಸಗಿರುವ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತುಗೊಳಿಸಲಾಗಿದೆ.

ತನಿಖೆ ನಡೆಸಿ ವರದಿ:
ಜಿಲ್ಲಾ ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿ ಅವರು ಡಾ.ಲೋಕೇಶ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಆಂತರಿಕ ದೂರು ಮಹಿಳಾ ಸಮಿತಿಯಲ್ಲೂ ತನಿಖೆ ನಡೆಯಲಿದೆ. ಪಿಜಿ ನರ್ಸಿಂಗ್ ವೈದ್ಯೆಗೆ ಲೈಂಗಿಕ ಕಿರುಕುಳ ಕೊಟ್ಟಿದ್ದಾರೆ ಎಂಬ ದೂರು ಬಂದಿದೆ. ಮೂರು ವಾರದೊಳಗೆ ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದಾರೆ. ಅದರಂತೆ ಕ್ರಮ ವಹಿಸಲಾಗುವುದು. ತನಿಖೆಗೆ ನೇಮಕ ಮಾಡಿರುವ ನಿನ್ನೆಯಷ್ಟೇ ಆದೇಶ ಬಂದಿದೆ. ಎಲ್ಲಾ ಮಾಹಿತಿ ಕಲೆ ಹಾಕಿ ವರದಿ ನೀಡಲಾಗುವುದು ಎಂದು ತನಿಖಾಧಿಕಾರಿಯಾಗಿರುವ ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಹೇಳಿದ್ದಾರೆ.

Post a Comment

0 Comments